logo
WhatsApp Image 2026-04-02 at 14.46.04.jpeg
hindalco everlast.jpeg

ಕೊರ್ಗಿಯಲ್ಲಿ ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣ: ಓರ್ವ ಆರೋಪಿಯ ಬಂಧನ

ಟ್ರೆಂಡಿಂಗ್
share whatsappshare facebookshare telegram
11 Aug 2022
post image

ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದಲ್ಲಿ ಆ.5ರಂದು ರಾಡ್ ನಿಂದ ಹಲ್ಲೆ ನಡೆಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ, ಕೈಯಲ್ಲಿದ್ದ ಬಳೆ ಹಾಗೂ ಉಂಗುರ ಸಹಿತ 1.60ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತ್ರಾಸಿ ಹೊಸಾಡು ಗ್ರಾಮದ ಭರತ್ ನಗರದ 24 ವರ್ಷದ ಪ್ರವೀಣ್ ಬಂಧಿತ ಆರೋಪಿ. ಈತ ಬೈಕ್ ನಲ್ಲಿ ಬಂದು ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ, ಕುತ್ತಿಗೆ ಹಾಗೂ ಕೈಯಲ್ಲಿದ್ದ ಚಿನ್ನಾಭರಣ ಸುಲಿಗೈದಿದ್ದನು. ಪ್ರಕರಣವನ್ನು ದಾಖಿಲಿಸಿಕೊಂಡು ತನಿಖೆಗೆ ಇಳಿದ ಕುಂದಾಪುರ ಗ್ರಾಮಾಂತರ ಪೊಲೀಸರು, ಆ.10ರಂದು ರಾತ್ರಿ ಗಂಗೊಳ್ಳಿ ತ್ರಾಸಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.