



ಬೆಂಗಳೂರು: ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಹಲವು ಸೇವೆಗಳು ಸೇರಿದಂತೆ ಹಲವಾರು ಸೇವೆಗಳನ್ನು ತಾಲ್ಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗ್ರಾಮೀಣ ಭಾಗದ ಜನರು ಕೆಲವು ಸೇವೆಗಳಿಗಾಗಿ ತಾಲ್ಲೂಕು ಕೇಂದ್ರಕ್ಕೆ ಹೋಗುವುದನ್ನು ತಪ್ಪಿಸುವ ಸಲುವಾಗಿ 2022ರ ಗಣರಾಜ್ಯೋತ್ಸವ ದಿನದಿಂದ ಗ್ರಾಮಪಂಚಾಯಿತಿಗಳಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ನೀಡಲು ಸಿದ್ದತೆ ನಡೆಸಲಾಗಿದ್ದು, ಅದಕ್ಕೆ ಪೂರ್ವಭಾವಿಯಾಗಿ ಇಂಟರ್‍ನೆಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.