



ನವದೆಹಲಿ: ತಮಿಳುನಾಡು ಮತ್ತು ಕರ್ನಾಟಕ ಮಧ್ಯೆ ಇರುವ ಪ್ರಮುಖ ಜಲ ವಿವಾದ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮನವಿಯನ್ನು ಆಲಿಸಲು ಇಂದೇ ವಿಚಾರಣಾ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ನೀರು ಬಿಡುಗಡೆ ಸಂಬಂಧ ತಮಿಳುನಾಡು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಅವರು ವಿಚಾರಣೆಗಾಗಿ ಪೀಠ ರಚಿಸುತ್ತೇವೆ ಎಂದು ತಿಳಿಸಿದ್ದಾರೆ. ಆಗಸ್ಟ್ ತಿಂಗಳ ನದಿ ನೀರಿನ ಪಾಲನ್ನು ಬಿಡುಗಡೆ ಮಾಡುವಲ್ಲಿ ಕರ್ನಾಟಕ ವಿಳಂಬ ಮಾಡಿದೆ ಎಂಬ ದೂರಿನ ಬಗ್ಗೆ ಹೊಸ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ಆಗಸ್ಟ್‌ಗೆ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕಿದೆ. ಈ ಬಗ್ಗೆ ತುರ್ತು ವಿಚಾರಣೆ ನಡೆಸಬೇಕಿದೆ. ಹೀಗಾಗಿ ಪೀಠವನ್ನು ರಚಿಸಬೇಕು. ಕೊನೆಯದಾಗಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಅವರ ನೇತೃತ್ವ ಪೀಠ ವಿಚಾರಣೆ ನಡೆಸಿತ್ತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ತಮಿಳುನಾಡು ಪರ ವಾದ ಮಂಡಿಸಿದರು. ಈ ಹಿನ್ನೆಲೆ ವಿಚಾರಣಾ ಪೀಠ ರಚಿಸುವ ಭರವಸೆಯನ್ನು ಕೋರ್ಟ್ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.