



ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಹಾಗೂ ಫಾರಿನ್ ಸಿಗರೇಟ್ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಕಾರ್ಯಾಚರಣೆಗೆ ಇಳಿದ ಸಿಸಿಬಿ ಪೊಲೀಸರು ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕೋರಮಂಗಲ, ಮೈಕೋಲೇಔಟ್, ಕಬ್ಬನ್ ಪಾರ್ಕ್, ಕೆ ಎಸ್ ಲೇಔಟ್, ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹಲವು ಅಂಗಡಿಗಳ ಮೇಲೆ ಇಂದು ಬೆಳಗ್ಗೆ ಏಕಕಾಲದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ 8.9 ಲಕ್ಷ ಮೌಲ್ಯದ 681 ಇ ಸಿಗರೇಟ್ ಹಾಗೂ 805 ಫಾರಿನ್ ಸಿಗರೇಟ್ ವಶಕ್ಕೆ ಪಡೆಯಲಾಗಿದ್ದು, ಕೋರಮಂಗಲ, ಮೈಕೋಲೇಔಟ್, ಕಬ್ಬನ್ ಪಾರ್ಕ್, ಕೆ ಎಸ್ ಲೇಔಟ್, ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗಳಲ್ಲಿ ಅಂಗಡಿ ಮಾಲೀಕರ ವಿರುದ್ಧ ದಿ ಪ್ರೊಹಿಬಿಷನ್ ಆಫ್ ಎಲೆಕ್ಟ್ರಾನಿಕ್ ಸಿಗರೇಟ್ ಆ್ಯಕ್ಟ್ ಹಾಗೂ COTPA act ಅಡಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.