



ಕಾರ್ಕಳ :ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ೬೮ನೇ ಕನ್ನಡ ರಾಜ್ಯೋತ್ಸವವೂ ಸಂಭ್ರಮದಿಂದ ನಡೆಯಿತು. ತಾಯಿ ಭುವನೇಶ್ವರಿ ದೇವಿಗೆ ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಂದ ಕನ್ನಡಾಭಿಮಾನ ಮೂಡಿಸುವ ನೃತ್ಯ ಮತ್ತು ಸಮೂಹ ಗಾಯನಗಳು ಜರುಗಿದವು.
ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಿ.ಇ.ಒ ಹಾಗೂ ಕಾರ್ಕಳ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರು ಶ್ರೀ ದಿನೇಶ್ ಎಂ.ಕೊಡವೂರು, ಉಪ ಪ್ರಾಂಶುಪಾಲರು ಶ್ರೀ ಸಾಹಿತ್ಯ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪ ಪ್ರಾಂಶುಪಾಲರು ಶ್ರೀಮತಿ ವಾಣ .ಕೆ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.