



ನಮ್ಮ ದೇಶವನ್ನು ಕನ್ನಡದಲ್ಲಿ ಭಾರತ ಅಂತ ಹರೆಯುತ್ತೇವೆ. ಹಿಂದಿಯಲ್ಲಿ ಭಾರತ್ ಎಂದು ಕರೆದರೆ, ಇಂಗ್ಲೀಷಿನಲ್ಲಿ ನಮ್ಮ ದೇಶ INDIA. ಇದೀಗ ನಮ್ಮ ದೇಶದ ಹೆಸರು ಬದಲಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು INDIA ವನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮುಂದಿನ ಐದು ದಿನಗಳ, ಸೆಪ್ಟೆಂಬರ್ 18 ರಿಂದ 22 ರವರೆಗೆ ವಿಶೇಷ ಸಂಸತ್ ಅಧಿವೇಶನ ನಡೆಯಲಿದ್ದು, ಈ ಅವಧಿಯಲ್ಲಿ ಹೊಸ ಸಂಸತ್ ಭವನದಲ್ಲಿ ನಿರ್ಣಯವನ್ನು ಪ್ರಧಾನಿ ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಿಪಬ್ಲಿಕ್ ಆಫ್ ಭಾರತ್ ಎಂದು ದೇಶಕ್ಕೆ ಮರುನಾಮಕರಣಕ್ಕೆ ಸರ್ಕಾರ ಮುಂದಾಗಿದೆ. ಇಂಡಿಯಾ ಎನ್ನುವ ಬದಲು ಭಾರತ ಎಂಬ ಹೆಸರನ್ನು ಮುಂಚೂಣಿಗೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅದಕ್ಕೆಲ್ಲ ಪುಷ್ಠಿ ಎನ್ನುವಂತೆ ರಾಷ್ಟ್ರಪತಿ ಭವನದ ಆಹ್ವಾನ ಪತ್ರದಲ್ಲಿ ದಿ ಪ್ರೆಸಿಡೆಂಟ್ ಆಫ್ ಭಾರತ್ ಎಂದು ಉಲ್ಲೇಖಿಸಲಾಗಿದೆ. ಇದರ ಗೋಜಲ ನಡುವೆಯೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ಅವರು ರಿಪಬ್ಲಿಕ್ ಆಫ್ ಭಾರತ್ ಎಂದು ಟ್ವೀಟ್ ಮಾಡಿದ್ದು, ಭಾರಿ ಸಂಚಲನ ಮೂಡಿಸಿದೆ.
ಅಲ್ಲದೆ, ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಇದೆ ಎಂದಿದ್ದಾರೆ. ನರೇಂದ್ರ ಮೋದಿಯವರು ಏನೇ ಜಾರಿಗೆ ತಂದರೂ- ಅದು ಒಳ್ಳೆಯದಿರಲಿ, ಕೆಟ್ಟದ್ದಿರಲಿ, ಎರಡೂ ಟೀಕೆಗೆ ಒಳಗಾಗುತ್ತಿರುತ್ತದೆ. ಇದು ಕೂಡಾ ವ್ಯಾಪಕ ಟೀಕೆಗೆ ಗುರಿಯಾಗುತ್ತಾ ಎನ್ನುವುದನ್ನು ಇನ್ನು ತಿಳಿದು ಬರಬೇಕಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.