logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ: ಶೋಭಾ ಕರಂದ್ಲಾಜೆ.

ಟ್ರೆಂಡಿಂಗ್
share whatsappshare facebookshare telegram
24 Jan 2022
post image

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು.

ರಾಜ್ಯದಲ್ಲಿ 10,100 ಕ್ಕೂ ಅಧಿಕ ನಾಡದೋಣಿಗಲಿದ್ದು, 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರ ಜೀವನಾಧಾರವಾಗಿದೆ, ಕೇಂದ್ರ ಸರಕಾರ ನೀಡುವ ಸೀಮೆ ಎಣ್ಣೆಯ ಮೇಲೆ ಈ ನಾಡ ದೋಣಿ ಮೀನುಗಾರಿಕೆಯು ಅವಲಂಬಿತವಾಗಿದೆ.

ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಸಚಿವರು, ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು, ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತವನ್ನು ಕಾಯುವಂತೆ ಕೇಳಿಕೊಂಡಿದ್ದರು.

ಕೇಂದ್ರ ಕೃಷಿ ರಾಜ್ಯ ಸಚಿವರ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಇಂದು (ದಿನಾಂಕ 24.01.22) ಕರ್ನಾಟಕ ಸರ್ಕಾರಕ್ಕೆ 2021-22ನೇ ಪಾಲಿನ 3540KL (35.40 ಲಕ್ಷ ಲೀಟರ್) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಕೇಂದ್ರ ಸರಕಾರ 2021-22ರ ಆರ್ಥಿಕ ವರ್ಷದಲ್ಲಿ 7080KL (70.8 ಲಕ್ಷ ಲೀಟರ್) ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಈಗಾಗಲೇ ಬಿಡುಗಡೆ ಮಾಡಿತ್ತು, ಇದಕ್ಕೆ ಹೆಚ್ಚುವರಿಯಾಗಿ 3540KL ಸೀಮೆ ಎಣ್ಣೆಯನ್ನು ಇಂದು ಬಿಡುಗಡೆ ಮಾಡುವ ಮೂಲಕ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಬೇಡಿಕೆಯನ್ನು ಈಡೇರಿಸಿದೆ.

ಈ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.