



ನವದೆಹಲಿ: ದೇಶದಲ್ಲಿ ಹೊಸ ನಗರಗಳ ಸ್ಥಾಪನೆ ಹಾಗೂ ಅಭಿವೃದ್ಧಿ ಕೆಲಸಗಳಿಗೆ ಅಡಿಪಾಯ ಹಾಕುವ ಸಲುವಾಗಿ, 15ನೇ ಹಣಕಾಸು ಆಯೋಗವು ತನ್ನ ವರದಿಯೊಂದರಲ್ಲಿ ನಗರಾಭಿವೃದ್ಧಿ ಬಗ್ಗೆ ಶಿಫಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ. ಬಿ. ಸಿಂಗ್ ಹೇಳಿದ್ದಾರೆ.
‘ಅರ್ಬನ್ 20’ ಎಂಬ ಹೆಸರಿನ ಸಭೆಯ ನಂತರ ಪಿಟಿಐ ಜೊತೆ ಮಾತನಾಡಿದ ಎಂ ಬಿ ಸಿಂಗ್, ಹಣಕಾಸು ಆಯೋಗದ ಶಿಫಾರಸಿನ ನಂತರ, 26 ಹೊಸ ನಗರಗಳಿಗಾಗಿ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ಪರಿಶೀಲನೆಯ ನಂತರ ಎಂಟು ಹೊಸ ನಗರಗಳನ್ನು ಅಭಿವೃದ್ಧಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.