



ಶಾಂಘೈ: ಕಳೆದ 100 ವರ್ಷಗಳಲ್ಲೇ ಅತಿ ಹೆಚ್ಚಿನ ತಾಪಮಾನ ಚೀನಾದ ಶಾಂಘೈನಲ್ಲಿ ಸೋಮವಾರ ದಾಖಲಾಗಿದೆ.
ಚೀನಾ ಹವಾಮಾನ ಇಲಾಖೆ ಈ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 1.09ರ ಸಮಯದಲ್ಲಿ ಶುಯಿಜಿ ಮೆಟ್ರೊ ನಿಲ್ದಾಣದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ನಂತರ, ಶಾಂಘೈನ ಕೇಂದ್ರ ಮೆಟ್ರೊ ನಿಲ್ದಾಣದಲ್ಲಿ ತಾಪಮಾನವು 36.7 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಯಿತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಪ್ರಮಾಣದ ತಾಪಮಾನವು 1876, 1903, 1915 ಮತ್ತು 2018ರಲ್ಲಿ ದಾಖಲಾಗಿತ್ತು. ಮುಂದಿನ ಐದು ವರ್ಷಗಳಲ್ಲಿ ಜಾಗತಿಕ ತಾಪಮಾನ ಈಗಿರುವುದಕ್ಕಿಂತಲೂ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ಎಚ್ಚರಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.