



ಬೆಂಗಳೂರ: ಮೇ 21,22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಶಿಕ್ಷಣ ಸಚಿವರು, 'ಮೇ 21,22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು.
ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸೂಕ್ತ ಕ್ರಮಗಳ ಬಗ್ಗೆ ಗೃಹ ಇಲಾಖೆ ಜೊತೆ ಚರ್ಚಿಸಿದ್ದೇವೆ' ಎಂದರು.
ಇನ್ನು ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ವಸ್ತು ಒಯ್ಯುವಂತಿಲ್ಲ. ಮೊಬೈಲ್, ವಾಚ್, ಎಲೆಕ್ಟ್ರಾನಿಕ್ ಡಿವೈಸ್‌ಗೆ ಅವಕಾಶ ಇತ್ತು. ಪ್ರಶ್ನೆಪತ್ರಿಕೆ ಗೌಪ್ಯತೆ, ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಪ್ರತಿ ಕೇಂದ್ರದಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗುವುದು. ಇನ್ನು ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅವಳವಡಿಸಿಕೊಳ್ಳಲಾಗುವುದು. ಅಂದ್ಹಾಗೆ, ಪರೀಕ್ಷೆಗೆ ಯಾವುದೇ ಡ್ರೆಸ್ ಕೋಡ್ ನಿಗದಿ ಪಡಿಸಿಲ್ಲ' ಎಂದು ಸ್ಪಷ್ಟಪಡಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.