



ಬೆಂಗಳೂರು: ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಸೇರಿದಂತೆ ಜೂ.16 ರಿಂದ ಜೂನ್ 18 ರವರೆಗೆ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಗೂ ಹಿಜಾಬ್ ಸೇರಿದಂತೆ ಕಿವಿ ಮತ್ತು ತಲೆಯನ್ನು ಮುಚ್ಚುವಂತಹ ಯಾವುದೇ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ
ಕಡ್ಡಾಯವಾಗಿ ಸರ್ಜಿಕಲ್ ಮಾಸ್ಕ್ ಧರಿಸಬೇಕು. ಪರೀಕ್ಷೆ ಕೇಂದ್ರಗಳಿಗೆ ಪರೀಕ್ಷಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಯಾವುದೇ ತರಹದ ಮೊಬೈಲ್, ಬ್ಲೂಟೂತ್, ಪೇಜರ್, ವೈರೆಲ್ಸ್ ಸೆಟ್, ಲಾ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ರಿಷ್ಟ ವಾಚ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಜೂನ್ 16 ರಂದು ಬೆಳಿಗ್ಗೆ 10-30 ರಿಂದ 11-50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ಜೂನ್ 17 ರಂದು ಬೆಳಿಗ್ಗೆ 10-30 ರಿಂದ 11-50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50ರವರೆಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.ಜೂನ್ 18 ರಂದು ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.
ಅಲ್ ದಿ ಬೆಸ್ಟ್ ವಿದ್ಯಾರ್ಥಿ ಗಳೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.