



ಸುಬ್ರಹ್ಮಣ್ಯ: ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ, ಉತ್ಸವಾದಿಗಳು ಜರಗಲಿವೆ. ಡಿ. 9ರಂದು ಮೂಲ ಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು. ಡಿ. 10ರಿಂದ 12ರ ವರೆಗೆ ಭಕ್ತರು ಕ್ಷೇತ್ರಕ್ಕೆ ಹಸಿರು ಕಾಣಿಕೆ ಸಮರ್ಪಿಸಬಹುದು. ಡಿ. 10ರಂದು ಕೊಪ್ಪರಿಗೆ ಏರುವ ಮೂಲಕ ಚಂಪಾಷಷ್ಠಿ ಮಹೋತ್ಸವ ಆರಂಭಗೊಳ್ಳಲಿದೆ. ರಾತ್ರಿ ಶೇಷ ವಾಹನಯುಕ್ತ ಬಂಡಿ ಉತ್ಸವ, ಡಿ.11 ರಂದು ರಾತ್ರಿ ಶೇಷ ವಾಹನಯುಕ್ತ ಬಂಡಿ ಉತ್ಸವ, ಡಿ.12 ರಂದು ಲಕ್ಷ ದೀಪೋತ್ಸವ, ಡಿ.13 ರಂದು ಶೇಷ ವಾಹನೋತ್ಸವ, ಡಿ.14, ಅಶ್ವವಾಹನೋತ್ಸವ, ಡಿ.15ರಂದು ಮಯೂರ ವಾಹನೋತ್ಸವ, ಡಿ. 16ರಂದು ರಾತ್ರಿ ಹೂವಿನ ತೇರಿನ ಉತ್ಸವ, ಡಿ. 17ರಂದು ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ, ಡಿ. 18ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವ, ಡಿ. 19ರಂದು ಅವಭೃತ ಉತ್ಸವ, ನೌಕಾವಿಹಾರ, ಡಿ. 24ರಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ಜರಗಲಿದೆ. 2024ರ ಜ. 16ರಂದು ಕಿರುಷಷ್ಠಿ ಮಹೋತ್ಸವ ಜರಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.