



ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ನಿಟ್ಟೆ ಪಾಲಿಟೆಕ್ನಿಕ್ ಕಾಲೇಜಿಗೆ ಚಾಂಪಿಯನ್ಶಿಪ್ ನಿಟ್ಟೆ: ಅ.4 ರಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಜರಗಿದ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ತಾಂತ್ರಿಕ ಶಿಕ್ಷಣ ಕಾಲೇಜುಗಳ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿಜೇತ ತಂಡದ ಪರವಾಗಿ ಸೂರಜ್ (ದ್ವಿತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿದ್ಯಾರ್ಥಿ) ಅತ್ಯುತ್ತಮ ಆಕ್ರಮಣಕಾರ ವೈಯಕ್ತಿಕ ಪ್ರಶಸ್ತಿಯನ್ನು ಪಡೆದರೆ, ಸುಪ್ರಿತ್ (ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿ) ಅತ್ಯುತ್ತಮ ಟೂರ್ನಮೆಂಟ್ ಪಾಸರ್ ವೈಯಕ್ತಿಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.