logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಸೇರಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
10 Dec 2023
post image

ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆದಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಜಯಪುರ, ಅಜ್ಜಂಪುರ, ನಾಯಕನಹಟ್ಟಿ, ಹೊಸದುರ್ಗ, ಕಡೂರು, ಕೊಟ್ಟಿಗೆಹಾರ, ಎನ್​ಆರ್​ಪುರ, ತರೀಕೆರೆ, ಯುಗಟಿ, ಬೇಲೂರು, ಮೂರ್ನಾಡು, ಹುಂಚದಕಟ್ಟೆ, ಮಂಗಳೂರು ವಿಮಾನ ನಿಲ್ದಾಣ, ಭಾಗಮಂಡಲ, ವೈ.ಎನ್. ಹೊಸಕೋಟೆ, ಸಿರಾ, ಬಾಳೆಹೊನ್ನೂರು, ಸಕಲೇಶಪುರದಲ್ಲಿ ಮಳೆಯಾಗಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಕಾಣಿಸಿಕೊಂಡಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.