



ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3ರ ಕ್ಯಾಮೆರಾದಲ್ಲಿ ಸೆರೆಹಿಡಿದ ಚಂದ್ರನ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಅದರ ಜತೆಗೆ ವಿಡಿಯೋವನ್ನು ಕೂಡ ಹಂಚಿಕೊಂಡಿದೆ.
ಶನಿವಾರ (ಆಗಸ್ಟ್ 5) ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ನಂತರ ಚಂದ್ರಯಾನ-3 ನೌಕೆ ಆ ದೃಶ್ಯವನ್ನು ಕಳುಹಿಸಿದೆ. ಚಂದ್ರನ ಮೇಲೆ ನೀಲಿ ಹಸಿರು ಬಣ್ಣದ ಹಲವು ಹೊಂಡಗಳಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ.
ಈ ಕುರಿತ ವಿಡಿಯೋವನ್ನು ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಜೀತೇಂದ್ರ ಸಿಂಗ್ ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಸೇತಿದೆ, ಹಾಗೆಯೇ ಚಂದ್ರಯಾನ-3 ಗಗನನೌಕೆಯನ್ನು ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಕೂಡ ಇಸ್ರೋ ಪೂರ್ಣಗೊಳಿಸಿದೆ. ಲ್ಯಾಂಡರ್ ಸದ್ಯ ಚಂದ್ರನ ಗುರುತ್ವಾಕರ್ಷಣೆ ಅನುಭವಿಸುತ್ತಿರುವುದಾಗಿ ಇಸ್ರೋ ತಿಳಿಸಿದೆ ಎಂದಿದ್ದಾರೆ.
ಜುಲೈ 14 ರಂದು ಉಡಾವಣೆಯಾದಾಗಿನಿಂದ, ಬಾಹ್ಯಾಕಾಶ ನೌಕೆಯು ಚಂದ್ರನ ಸುಮಾರು ಮೂರನೇ ಎರಡರಷ್ಟು ದೂರವನ್ನು ಕ್ರಮಿಸಿದೆ ಮತ್ತು ಮುಂದಿನ 17 ದಿನಗಳು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೋ) ನಿರ್ಣಾಯಕವಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.