



ಬೆಂಗಳೂರು: ಇಂದಿನಿಂದ ಗುತ್ತಿಗೆ ಹೊರಗುತ್ತಿಗೆ ಆರೋಗ್ಯ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರು ಚಲೋ ನಡೆಸುವ ಮೂಲಕ ಇಲಾಖೆಯ ಪ್ರತಿಭಟನೆಗೆ ಇಳಿಯಲಿದ್ದಾರೆ .ಆದ್ದರಿಂದ ಇಂದಿನಿಂದ ಸರಕಾರಿ ಅರೋಗ್ಯ ಸೇವೆಗಳಿಗೆ ಅಡಚಣೆ ಗಳಾಗುವ ಸಾಧ್ಯತೆ ಗಳಿವೆ ಎನ್ನಲಾಗಿದೆ.
ಹೊರಗುತ್ತಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಿಲ್ಲ. ಮೌಲ್ಯಮಾಪನದಂತ ಪದ್ಧತಿಯನ್ನು ರದ್ದುಗೊಳಿಸಬೇಕು. ಶ್ರೀನಿವಾಸಾಚಾರಿ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಗುತ್ತಿಗೆ ಹೊರಗುತ್ತಿಗೆ ನೌಕರರು ಪಟ್ಟು ಹಿಡಿದಿದ್ದಾರೆ. ಅವರ ಹಲವು ಬೇಡಿಕೆಗಳನ್ನು ಸರಕಾರ ಈಡೇರಿಸಿಲ್ಲ . ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.