logo
WhatsApp Image 2026-04-02 at 14.46.04.jpeg
hindalco everlast.jpeg

ಚಾಂತಾರು: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
5 Feb 2022
post image

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ರಥಬೀದಿಯ ದೇವಾಡಿಗರ ಬೆಟ್ಟು ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಚಾಂತಾರು ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ 38 ವರ್ಷದ ಉದಯ ನೇಣಿಗೆ ಶರಣಾದ ವ್ಯಕ್ತಿ. ಇವರು ಫೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದರು. ಇದೇ ಖಿನ್ನತೆಯಲ್ಲಿ ಬಳಲುತ್ತಿದ್ದ ಉದಯ್, ಫೆ‌.4ರ ರಾತ್ರಿ 8:45ರಿಂದ ಫೆ.5ರ ಬೆಳಿಗ್ಗೆ 8:30ರ ಮಧ್ಯ ಅವಧಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.