



ಮಂಡ್ಯ: ಮನೆಯಲ್ಲಿ ಎಲೆಕ್ಟ್ರಿಕ್ ಚಾರ್ಜ್ ಹಾಕಿದ್ದ ಬೈಕ್‌ವೊಂದು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಗೃಹ ಉಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ಜರುಗಿದೆ.
ವಳೆಗೆರೆಹಳ್ಳಿಯ ಮುತ್ತುರಾಜ್ ಎಂಬುವವರ ಮನೆಯ ಒಳ ಭಾಗದಲ್ಲಿ ಬೈಕ್ ಚಾರ್ಜ್ ಹಾಕಿದ್ದ ವೇಳೆ ಈ ಘಟನೆ ಜರುಗಿದೆ. ಬೈಕ್ ಚಾರ್ಜ್ ಹಾಕಿದ್ದ ವೇಳೆ ಇದಕ್ಕಿದ್ದ ಹಾಗೆ ಸ್ಫೋಟಗೊಂಡಿದ್ದು, ಈ ವೇಳೆ ಮನೆಯ ಒಳಭಾಗದಲ್ಲಿ ಇದ್ದ 5 ಮಂದಿ ಬೆಚ್ಚಿ ಬಿದ್ದಿದ್ದಾರೆ.
ಅದೃಷ್ಟವಶಾತ್ ಎಲ್ಲರೂ ಬೈಕ್‌ನಿಂದ ದೂರವಿದ್ದರಿಂದ ಪ್ರಾಣಾಪಾಯದಿಂದ ಪಾರಗಿದ್ದಾರೆ. ಇನ್ನೂ ಈ ಸ್ಫೋಟದಿಂದ ಪಕ್ಕದಲ್ಲಿ ಇದ್ದ ಟಿವಿ, ಫ್ರಿಡ್ಜ್, ಡೈನಿಂಗ್ ಟೇಬಲ್ ಸೇರಿದಂದೆ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ. ಬಳಿಕ ಸ್ಫೋಟದ ಬೆಂಕಿಯನ್ನು ಕುಟುಂಬಸ್ಥರು ನಂದಿಸಿದ್ದಾರೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.