



ಹೆಬ್ರಿ:ಇಂದು ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರ ಹೆಬ್ರಿ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಅರಿವು ಕೇಂದ್ರದ ವತಿಯಿಂದ ಓದುವ ಬೆಳಕು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ತಿಂಗಳ ಸಡಗರ ಕಾರ್ಯಕ್ರಮದಲ್ಲಿ ಅಂಬಲಪಾಡಿ ಜಾನಕಿ ವ್ಯಾಸ ಬಲ್ಲಾಳ ದತ್ತಿ ಹಾಗೂ ಶ್ರೀ ಸದಾನಂದ ಸುವರ್ಣ ದತ್ತಿ ಉಪನ್ಯಾಸವು ಅ.ಪೊಳಲಿ ಬಾಲಕೃಷ್ಣ ಶೆಟ್ಟಿ ಮತ್ತು ಡಾ.ಶಿವರಾಮ ಕಾರಂತ ಬದುಕು ಮತ್ತು ಬರೆಹ ಎಂಬ ಎರಡು ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿತ್ತು.
ಅಮೃತ ಭಾರತಿ ಪ್ರೌಢಶಾಲೆ ಹೆಬ್ರಿ ಇಲ್ಲಿಯ ಕನ್ನಡ ಅಧ್ಯಾಪಕರಾದ ಮಹೇಶ್ ಹೈಕಾಡಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತ್ ಗ್ರಂಥಾಲಯದ ಅರಿವು ಕೇಂದ್ರದ ವತಿಯಿಂದ ನಡೆಸಲಾದ ಓದುವ ಬೆಳಕು ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಾವು ಓದಿದ ಮೆಚ್ಚಿನ ಪುಸ್ತಕದ ಕುರಿತು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಮುದ್ದೂರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಗ್ರಂಥಾಲಯದಸಹಯೋಗದೊಂದಿಗೆ ನಡೆಸಲಾದ ಈ ಕಾರ್ಯಕ್ರಮದಿಂದ ಪರಿಷತ್ತಿನ ಉದ್ದೇಶ ನೆರವೇರಿದೆ. ವಿದ್ಯಾರ್ಥಿಗಳಲ್ಲಿ ಓದಿನ ಅಭಿರುಚಿಯನ್ನು ಬೆಳೆಸುವ ಇಂತಹ ಕಾರ್ಯಕ್ರಮ ತುಂಬಾ ಸೂಕ್ತವಾದದ್ದು" ಎಂದು ಹೇಳಿದರು. ವೇದಿಕೆಯಲ್ಲಿ ಹೆಬ್ರಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಅಶೋಕ್, ಹೆಬ್ರಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್.ಜನಾರ್ದನ್, ಶಿಕ್ಷಣ ಪೌಂಡೇಶನ್ ನ ತಾಲೂಕು ಸಂಯೋಜಕರಾದ ವಿಜಯಲಕ್ಷ್ಮಿ, ಹಾಗೂ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾದ ಹರಿಕಿರಣ್ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಡಾ. ಪ್ರವೀಣ ಕುಮಾರ್ ಎಸ್ ಅವರು ಉಪನ್ಯಾಸದ ಕುರಿತು ಪ್ರತಿಸ್ಪಂದನ ಮಾತುಗಳನ್ನಾಡಿದರು.
ಗ್ರಂಥಪಾಲಕರಾದ ಪುಷ್ಪಾವತಿ ಶೆಟ್ಟಿ ಅವರುಪ್ರಾಸ್ತಾವಿಕಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಗೌರವ ಕಾರ್ಯದರ್ಶಿಮಂಜುನಾಥ ಕೆ. ಶಿವಪುರ ಕಾರ್ಯಕ್ರಮವನ್ನು ನಿರೂಪಿಸಿದರು ಸಂಘಟನಾ ಕಾರ್ಯದರ್ಶಿ ಪ್ರಿತೇಶ್ ಶೆಟ್ಟಿ ವಂದಿಸಿದರು.
ಕಾರ್ಯಕ್ರಮದಲ್ಲಿ ಕ.ಸಾ.ಪ ಪದಾಧಿಕಾರಿಗಳು, ಗ್ರಂಥಾಲಯ ಓದುಗರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.