



ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ,ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಕಾರದಲ್ಲಿ ದಿ | ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭವನ್ನು ನವೆಂಬರ್ 11ರಂದು ಬೆಳ್ಳಿಗೆ 10.30ಕ್ಕೆ ಡಾಕ್ಟರ್ ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನಲ್ಲಿ ನಡೆಸಲಾಗುವುದು. ಉಪನ್ಯಾಸವನ್ನು ಪ್ರಸಿದ್ಧ ಉರಗ ತಜ್ಞ ಗುರುರಾಜ್ ಸನಿಲ್ ನೀಡಲಿದ್ದಾರೆ ಹಾಗೂ ಇದೇ ಸಂದರ್ಭದಲ್ಲಿ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಅನುಪಮಾ ಪ್ರಮೋದ್ ತಂತ್ರಿಯವರನ್ನು ಗೌರವಿಸಲಾಗುವುದು ಎಂದು ಕ ಸಾ ಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.