



ಹಾಸನ: ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ವಿಧಿವಶರಾದರು.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿಶ್ರೀಗಳು ಕಳೆದ ನಾಲ್ಕು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಗುರುವಾರ ಬೆಳಗ್ಗೆ ಸ್ವಾಮೀಜಿ ಅವರ ಆರೋಗ್ಯದಲ್ಲಿ ಧಿಡೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಶ್ರವಣಬೆಳಗೊಳ ಮಠಕ್ಕೆ ವೈದ್ಯರನ್ನು ಕರೆಸಿ ಶ್ರೀಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಯಿತಾದರೂ ಪ್ರಯೋಜನವಾಗಲಿಲ್ಲ. ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. . ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.