



ಅಹ್ಮದಾಬಾದ್: ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ ನಿಗಧಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು. ಬಳಿಕ ಮಳೆ ಬಂದು ಆಟ ಸ್ಥಗಿತವಾಗಿತ್ತು. ಬಳಿಕ ಆಟ ಪ್ರಾರಂಭವಾದಾಗ ಅಂಪೈರ್ ಗಳು ಗುರಿಯನ್ನು ಪರಿಷ್ಕರಿಸಿದ್ದು 15 ಓವರ್ ನಲ್ಲಿ 171 ರನ್ ಗಳ ಬೃಹತ್ ಗುರಿಯನ್ನು ನಿಗದಿ ಪಡಿಸಿತು. ಈ ಮೊತ್ತವನ್ನು ಬೆನ್ನು ಹತ್ತಿದ ಚೆನ್ನೈ ತಂಡ ನಿಗದಿತ 15 ಓವರ್ ನಲ್ಲಿ 172 ರನ್ ಗಳಿಸಿ 5 ವಿಕೆಟ್ ಗಳ ಅಂತರ ವಿರೋಚಿತ ಜಯ ದಾಖಲಿಸಿತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.