logo
WhatsApp Image 2026-04-02 at 14.46.04.jpeg
hindalco everlast.jpeg

ಚದುರಂಗ : ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
20 Oct 2023
post image

ಕಾರ್ಕಳ : ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಬೆಂಗಳೂರು ದಕ್ಷಿಣ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೊಮ್ಮಸಂದ್ರ, ಆನೇಕಲ್, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ರಾಜ್ಯಮಟ್ಟದ ಚೆಸ್ ಪಂದ್ಯಾಟವು ಅ.11 ರಿಂದ 14 ರವರೆಗೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೊಮ್ಮಸಂದ್ರ, ಆನೇಕಲ್ ಬೆಂಗಳೂರಿನಲ್ಲಿ ನಡೆಯಿತು. ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕು.ದಿಶಾ ಯು. ಎ (೧೦ ನೇ ತರಗತಿ) ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕು.ದಿಶಾ ಯು.ಎ ಇವರು ಪರ್ಕಳದ ಶ್ರೀ ಉಮೇಶ್ ಎಲ್ ನಾಯಕ್ ಹಾಗೂ ಶ್ರೀಮತಿ ಆಶಾ ನಾಯಕ್ ಇವರ ಸುಪುತ್ರಿಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿ, ಶುಭ ಹಾರೈಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.