



ಚೆನ್ನೈ : ದ.ಭಾರತದ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ ಜುಲೈ8 ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ ತಮಿಳುನಾಡು ಸರ್ಕಾರದ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ. 2011ರಲ್ಲಿ ಪೀಪಲ್ಸ್ ಯೂನಿವರ್ಸಿಟಿ ಆಫ್ ಮಿಲನ್ ಗೌರವ ಡಾಕ್ಟರೇಟ್ ಪಡೆದಿದ್ದಾರೆ.ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.