



ಮಂಗಳೂರು: ನಗರದ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಆಗಮಿಸಲಿದ್ದಾರೆ.
ಸಿಎಂಗೆ ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ ಅ.13ರ ಮಧ್ಯಾಹ್ನ 3 ರಿಂದ ಸಂಜೆ 7 ಗಂಟೆಯವರೆಗೆ ಆಗಮಿಸುವ ಭಕ್ತಾಧಿಗಳಿಗೆ ಅನಾನುಕೂಲವಾಗಲಿದೆ. ರಾತ್ರಿ 7 ರಿಂದ ಎಂದಿನಂತೆ ದರುಶನಕ್ಕೆ ಅವಕಾಶವಿದೆ. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಾಗರೀಕರು ಸಹಕರಿಸುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.