


ಚಿಕ್ಕಮಗಳೂರು: ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದ್ದು, ಮಂಗನ ಕಾಯಿಲೆಯಿಂದಾಗ ಚಿಕ್ಕಮಗಳೂರಿನಲ್ಲಿ ಸೋಮವಾರ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65 ವರ್ಷ) ಮೃತ ದುರ್ದೈವಿ. ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಹೆಚ್ಚಿನ ಚಿಕಿತ್ಸೆ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಡಿದ್ದಾರೆ. ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಈ ವರ್ಷ ಮೊದಲ ಬಲಿ ಪಡೆದುಕೊಂಡಿದೆ.
ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢವಾಗಿದೆ. ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದೆ. ಹೀಗಾಗಿ, ಮಲೆನಾಡು ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.