



ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
ಚಿಕ್ಕಮಗಳೂರು ಜಿಲ್ಲೆಯಲ್ಲೂ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಡೂರು ಸಮೀಪದ ಅಜ್ಜಂಪುರ ತಾಲೂಕಿನಲ್ಲಿ ಎಸ್ ಡಿಎ ತಿಮ್ಮಯ್ಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ ಮೂರು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಡೂರು ಪಟ್ಟಣದ ತಿಮ್ಮಯ್ಯ ನಿವಾಸ,
ತಿಮ್ಮಯ್ಯ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಜಂಪುರ ಪುರಸಭೆ ಕಚೇರಿ, ತಿಮ್ಮಯ್ಯ ತಂದೆಯ ಬಸೂರು ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ 80 ಲಕ್ಷಕ್ಕೂ ಅಧಿಕ ಹಣ ಗಳಿಸಿರುವ ಆರೋಪ ಇವರ ಮೇಲಿದೆ. ಮೂರು ಕಡೆಗಳಲ್ಲೂ
ಎಸಿಬಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.