



ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನ ಪರಿಷತ್ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿಯ ಹೋರಾಟದಲ್ಲಿ ಕೊನೆ ಘಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಿಂದ ಇಬ್ಬರೂ ಅಭ್ಯರ್ಥಿಗಳ ಮಧ್ಯೆ ಅತ್ಯಂತ ಪೈಪೋಟಿ ಏರ್ಪಟಿದ್ದು, ಅಂತಿಮವಾಗಿ ಆರು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರಾಭವಗೊಂಡರು. 2410 ಮತಗಳ ಪೈಕಿ 39 ಮತಗಳು ಅಸಿಂಧುಗೊಂಡಿತ್ತು. ಎಂ.ಕೆ ಪ್ರಾಣೇಶ 1188 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1182 ಮತಗಳನ್ನು ಪಡೆದುಕೊಂಡರು.
ಕಾಂಗ್ರೆಸ್ ಅಭ್ಯರ್ಥಿ ಆರು ಮತಗಳಿಂದ ಪರಭವಗೊಂಡಿದ್ದರಿಂದ ಚುನಾವಣಾ ಅಧಿಕಾರಿಗಳ ಬಳಿ ಮರು ಮತ ಎಣಿಕೆಗೆ ಮನವಿ ಮಾಡಿದ್ದಾರೆ. ಆದರೆ ಅಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮರು ಮತ ಎಣಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.