



ಸುದ್ದಿಸಂಚಲನ ಡೆಸ್ಕ್ : ಕೋವಿಡ್‌ನಿಂದಾಗಿ ಭಾರತದಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಚೀನಾಕ್ಕೆ ವಾಪಸಾಗಲು ಚೀನಾ ವಿದೇಶಾಂಗ ಇಲಾಖೆ ಅನುಮತಿ ನೀಡಿದೆ.
ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ವಿದ್ಯಾರ್ಥಿಗಳ ವಾಪಸಾತಿಗೆ ಅನುಮತಿಸಿದ್ದಾರೆ. ಸದ್ಯಕ್ಕೆ ಕೆಲವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದಿರುವ ಚೀನಾ, ಕರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಚೀನಾ ಕೆಲವು ನಿರ್ಬಂಧಗಳನ್ನು ವಿಧಿಸಿದ್ದರು. ಹಾಗಾಗಿ ಅಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಹಿಂದಿರುಗಲು ಸಾಧ್ಯವಾಗಿರಲಿಲ್ಲ.ಚೀನಾದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು, ಸುಮಾರು 23,000 ಭಾರತೀಯ ವಿದ್ಯಾರ್ಥಿಗಳು ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.