logo
WhatsApp Image 2026-04-02 at 14.46.04.jpeg
hindalco everlast.jpeg

ಕ್ರೈಸ್ಟ್ ಕಿಂಗ್: ಕ್ರಿಕೆಟ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ, ಶ್ರೀಮದ್ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕಾರ್ಕಳದ ಗಾಂಧಿಮೈದಾನದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಕ್ರಿಕೆಟ್ ಆಟಗಾರರ ಆಯ್ಕೆ ಪ್ರಕಿಯೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ಎಂಟು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆರನೇ ತರಗತಿಯ ವಿನೀತ್ ಪೂಜಾರಿ, ಏಳನೇ ತರಗತಿಯ ಅರ್ಜುನ್, ತನ್ಮಯ್, ಎಂಟನೇ ತರಗತಿ ಪಾರ್ಥಿವ್, ಗಗನ್, ಹತ್ತನೇ ತರಗತಿಯ ಅಶರ್, ರೀವನ್, ಸ್ವಸ್ತಿಕ್ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಇವರು ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಲಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣ ಪ್ರಸಾದ್ ಹಾಗೂ ಪ್ರಕಾಶ್ ನಾಯ್ಕ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.