



ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ, ಕರ್ನಾಟಕ ಸರಕಾರ ಹಾಗೂ ವಿವೇಕ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಮೈಸೂರಿನಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಮೂಲಕ ಕ್ರೈಸ್ಟ್ ಕಿಂಗ್ ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆ ಸತತ ಎರಡನೇ ಬಾರಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳಾಗ ಏಳನೇ ತರಗತಿಯ ಶಗುನ್ ಎಸ್ ವರ್ಮಾ, ಶೈನಿ ಡಿ’ಸೋಜಾ, ಅವ್ನಿ ಆರ್ ಕುಮಾರ್, ಸಾದಿಯ ಮೆಹರ್, ದಿತ್ಯ ಶೆಟ್ಟಿ, ಆರನೇಯ ತರಗತಿಯ ಶಾನ್ವಿ ಶೆಟ್ಟಿ, ಐಶ್ವರ್ಯ, ಪಾವನಿ, ಎಂಟನೇ ತರಗತಿಯ ಸಾಂಚಿ ರಾವ್, ವಿಲ್ಶ ಡಿ’ಸೋಜಾ ತಂಡದ ಸದಸ್ಯರಾಗಿದ್ದರು. ಶೈನಿ ಡಿ’ಸೋಜಾ ಅಲ್ ರೌಂಡರ್ ಪ್ರಶಸ್ತಿ ಪಡೆದರೆ ಶಗುನ್ ವರ್ಮಾ ಉತ್ತಮ ಅಟ್ಯಾಕರ್ ಪ್ರಶಸ್ತಿಯನ್ನು ಗಳಿಸಿರುತ್ತಾಳೆ. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ತಂಡದ ನೇತೃತ್ವ ವಹಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.