



ಕಾರ್ಕಳ: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮೈಸೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಮೈಸೂರು ಇವರ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣ ಜ್ಯ ವಿಭಾಗದ ವಿದ್ಯಾರ್ಥಿನಿ ರಚನಾ ಪದ್ಮಶಾಲಿ ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಕು.ಲಾವಣ್ಯ ಶೆಟ್ಟಿ ತರಬೇತಿ ನೀಡಿದ್ದರು. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.