



ಕಾರ್ಕಳ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣ ಜ್ಯ ವಿಭಾಗದ ವಿದ್ಯಾರ್ಥಿನಿ ರಚನಾ ಪದ್ಮಶಾಲಿ ಮತ್ತು ಅಂಕಿತ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ದಸರಾ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜೊತೆಗೆ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಕು. ಲಾವಣ್ಯ ಶೆಟ್ಟಿ ದಸರಾ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ದಸರಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.