



ಕಾರ್ಕಳ: 2022 -23 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು 100% ಫಲಿತಾಂಶವನ್ನು ಪಡೆದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ 85 ಹಾಗೂ ವಿಜ್ಞಾನ ವಿಭಾಗದಲ್ಲಿ 103 ವಿದ್ಯಾರ್ಥಿಗಳನ್ನು ಸೇರಿದಂತೆ ಒಟ್ಟು 188 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ವಾಣಿಜ್ಯ ವಿಭಾಗವು 15ನೇ ಬಾರಿ ನೂರು ಶೇಕಡಾ ಫಲಿತಾಂಶ ಪಡೆದುಕೊಂಡಿದ್ದು, ಈ ಬಾರಿ ಪ್ರೀಶಲ್ ಡಿ’ ಅಲ್ಮೇಡಾ 591 ಅಂಕ ಗಳಿಕೆಯೊಂದಿಗೆ ರಾಜ್ಯಮಟ್ಟದಲ್ಲಿ 7ನೇ ರ‍್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವೈಷ್ಣವಿ ಪೈ, ವೆರಿನಾ ಪೆರಿಸ್, ಹಾಗೂ ವಿವಿನ್ ಡಿ’ಸೋಜ 583 ಅಂಕಗಳನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದ 14 ಹಾಗೂ ವಾಣಿಜ್ಯ ವಿಭಾಗದಲ್ಲಿ 14 ಮಂದಿ ಸೇರಿದಂತೆ ಒಟ್ಟು 28 ವಿದ್ಯಾರ್ಥಿಗಳು ಶೇ. 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ 41 ಹಾಗೂ ವಿಜ್ಞಾನ ವಿಭಾಗದಲ್ಲಿ 47 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 57 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 71 ವಿದ್ಯಾರ್ಥಿಗಳು ಸೇರಿದಂತೆ 128 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ತೇರ್ಗಡೆಯಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.