



ಚಂಡೀಗಢ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳ ನಡುವೆ ಘರ್ಷಣೆ ನಡೆದಿದ್ದು, ಜೈಲಿನಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ.
ಮೂವರು ಆರೋಪಿಗಳನ್ನು ಪಂಜಾಬ್‌ನ ಗೋಯಿಂದ್ವಾಲ್ ಜೈಲಿನಲ್ಲಿ ಇರಿಸಲಾಗಿದ್ದು, ಮೂವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿ ಕೇಶವ್‌ನನ್ನ ಪೊಲೀಸರು ಅಮೃತ್‌ಸರದ ಗುರುನಾನಕ್ ದೇವ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಪಂಜಾಬ್‌ನ ಖ್ಯಾತ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ದುರಾನ್ ಮಂದೀಪ್ ತೂಫಾನ್, ಮನಮೋಹನ್ ಸಿಂಗ್ ಮತ್ತು ಕೇಶವ್ ಅವರ ನಡುವೆ ಘರ್ಷಣೆ ನಡೆದಿದ್ದು, ಪ್ರಮುಖ ಆರೋಪಿಗಳಾದ ಮಂದೀಪದ, ಮನಮೋಹನ್ ಸಿಂಗ್ ಸಾವನ್ನಪ್ಪಿದ್ದಾರೆ. ಘರ್ಷಣೆಗೆ ಬಳಸಿದ ಹರಿತವಾದ ಆಯುಧಗಳನ್ನು ಆರೋಪಿಗಳು ಜೈಲಿನಲ್ಲಿಯೇ ತಯಾರಿಸಿಕೊಂಡಿದ್ದರು ಎನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.