logo
WhatsApp Image 2026-04-02 at 14.46.04.jpeg
hindalco everlast.jpeg

ಬಜೆಟ್ ನಲ್ಲಿ ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ: ಸಚಿವ ಕೋಟ

ಟ್ರೆಂಡಿಂಗ್
share whatsappshare facebookshare telegram
7 Feb 2022
post image

ಉಡುಪಿ: ಈ ಬಾರಿಯ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕೋವಿಡ್ ಕಾರಣದಿಂದ ಅನುದಾನ ಕಡಿತಗೊಂಡಿತ್ತು. 3500 ದಿಂದ 4 ಸಾವಿರ ಕೋಟಿ ಅನುದಾನ ದೊರಕಿತ್ತು. ಆದರೆ, ಈ ಸಲ ಬಜೆಟ್ ನಲ್ಲಿ ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಲಾಗುವುದು ಎಂದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.