logo
WhatsApp Image 2026-04-02 at 14.46.04.jpeg
hindalco everlast.jpeg

ಸುಳ್ಳು ಸುದ್ದಿಗಳ ಮೂಲ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಟ್ರೆಂಡಿಂಗ್
share whatsappshare facebookshare telegram
20 Jun 2023
post image

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಸುಳ್ಳು ಸುದ್ದಿಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.

ಸೈಬರ್ ಪೊಲೀಸರು ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆಹಚ್ಚಲು ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.