



ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ರಾತ್ರಿ 11:30ರ ವೇಳೆಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದರಿಂದಾಗಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸದ ಸಮಯದಲ್ಲಿ ಬದಲಾವಣೆಯಾಗಿದೆ. ಬೆಳಗ್ಗೆ 9:50ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿದ್ದ ಅವರು ಸ್ವಲ್ಪ ತಡವಾಗಿ ದೆಹಲಿಗೆ ತೆರಳಲಿದ್ದಾರೆ.
ಬೆಳಗ್ಗೆ 11:30ಕ್ಕೆ ಹೆಚ್‍ಎಎಲ್‍ನ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ. ತೆರಳುವ ಮುನ್ನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.