



ಲಖನೌ:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಸಂಭವಿಸಿದ ಕೋಲ್ಡ್ ಸ್ಟೋರೇಜ್ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ.
ಸಂಭಾಲ್ ಜಿಲ್ಲೆಯ ಚಂದೌಸಿ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿತ್ತು.
ಅಧಿಕೃತ ಮೂಲಗಳ ಪ್ರಕಾರ, ಶನಿವಾರ ಮತ್ತೆ ಇಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು 21 ಜನರನ್ನು ರಕ್ಷಿಸಿದ್ದು, ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂಭಾಲ್ ಜಿಲ್ಲಾ ತೋಟಗಾರಿಕಾ ಅಧಿಕಾರಿಯನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.