



ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಸೋಮವಾರ (ಮೇ 1) ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು ಕಡಿಮೆ ಮಾಡಿವೆ.
ತಕ್ಷಣದಿಂದಲೇ ಹೊಸ ದರ ಜಾರಿಗೆ ಬಂದಿದ್ದು, ಸಿಲಿಂಡರ್ ಬೆಲೆ ಒಂದೇ ಬಾರಿಗೆ 171.50 ರೂಪಾಯಿ ಇಳಿಕೆಯಾಗಿದೆ.
ಆದರೆ, 14.2 ಕೆಜಿ ಗೃಹಬಳಕೆಯ ಅಡುಗೆ ಅನಿಲದ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ತೈಲ ಕಂಪನಿಗಳು ತಮ್ಮ ವೆಬ್‌ಸೈಟ್‌ನಲ್ಲಿ ಹೊಸ ದರಗಳನ್ನು ನವೀಕರಿಸಿವೆ.
ಕಳೆದ ಏಪ್ರಿಲ್ 1ರಂದು ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಸುಮಾರು 92 ರೂ.ಗಳಷ್ಟು ಅಗ್ಗವಾಗಿತ್ತು. ಮಾರ್ಚ್‌ನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 350 ರೂ.ಗಿಂತ ಹೆಚ್ಚಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.