logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜಲ ಜೀವನ್ ಮಿಷನ್ ನ ಕಾಮಗಾರಿ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ: ಸಿಇಓ ಪ್ರಸನ್ನ ಹೆಚ್

ಟ್ರೆಂಡಿಂಗ್
share whatsappshare facebookshare telegram
16 Aug 2023
post image

ಉಡುಪಿ, ಆಗಸ್ಟ್ 16: ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸುವ ಜಲ ಜೀವನ್ ಮಿಷನ್ ನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಅವರು ತಿಳಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಜಲ ಜೀವನ್ ಮಿಷನ್ ಯೋಜನೆಯಕಾಮಗಾರಿಗಳನ್ನು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ ಜನ ಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದoತೆ ನೋಡಿಕೊಳ್ಳಬೇಕು ಎಂದರು.

ಈ ಯೋಜನೆಯಡಿ ಜಿಲ್ಲೆಯಲ್ಲಿ 2,47,190 ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 3 ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೊಂಡು 1,90,974 ಮನೆಗಳಿಗೆ ನಲ್ಲಿ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ತ್ವರಿತವಾಗಿ ನೀರಿನ ಸಂಪರ್ಕವನ್ನು ಕಲ್ಪಿಸಬೇಕು ಎಂದರು.

3 ಹಂತಗಳಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಮೊದನೇ ಹಂತದಲ್ಲಿ 17 ಕಾಮಗಾರಿಗಳನ್ನು ಜಾಗದ ಸಮಸ್ಯೆ ಸೇರಿದಂತೆ ಮತ್ತಿತರೆ ಕಾರಣಗಳಿಂದ ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಇವುಗಳನ್ನು ಆದ್ಯತೆಯ ಮೇಲೆ ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಪೂರ್ಣಗೊಳಿಸಬೇಕು ಎಂದರು.

ಕಾಮಗಾರಿಗಳನ್ನು ಕೈಗೊಳ್ಳಲು ಕೆಲವು ಗುತ್ತಿಗೆದಾರರು ನಿರ್ಲಕ್ಷವಹಿಸಿ ವಿನಾಕಾರಣ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ಇದ್ದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ಉ ದಯಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್,ಡಿಡಿಪಿಐ ಗಣಪತಿ ಕೆ. ಮತ್ತಿತರರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.