



ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಇರಲಿವೆ ಎಂದು ಹಿರಿಯ ನಾಯಕ ಪರಮೇಶ್ವರ್ ಹೇಳಿದ್ದಾರೆ.
ಗ್ರಾಮೀಣ ಭಾಗದ ಜನರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇದ್ದು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.
ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.
ಸಿಎಂ ಆಯ್ಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕುಳಿತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.