


ಕಾಂಗ್ರೆಸ್ 35 ಜಿಲ್ಲಾಧ್ಯಕ್ಷರ ನೇಮಕ: ಯಾವ ಜಿಲ್ಲೆಗೆ ಯಾರು?
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸಂಘಟನಾ ಬಲವರ್ಧನೆಗೆ ಮುಂದಾಗಿದೆ. ಇದರ ಭಾಗವಾಗಿ ಎಐಸಿಸಿ ಕರ್ನಾಟಕದ 35 ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.
ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಕೈಗೊಂಡಿರುವ **‘ಸಂಘಟನಾ ಸೃಜನ್ ಅಭಿಯಾನ’**ದಡಿ ಈ ನೇಮಕಾತಿ ಪ್ರಕ್ರಿಯೆ ನಡೆದಿದೆ. ಅಭಿಯಾನದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಮಟ್ಟದಲ್ಲಿ ಪರಿಶೀಲನೆ ನಡೆಸಿದ್ದರು.
ಜಿಲ್ಲೆಯ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಸಿದ್ಧಪಡಿಸಿದ ವರದಿಗಳನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿತ್ತು. ಬಳಿಕ ಎಐಸಿಸಿ ವೀಕ್ಷಕರು ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಎಐಸಿಸಿ ಅಧ್ಯಕ್ಷರು ಪಟ್ಟಿಗೆ ಅನುಮೋದನೆ ನೀಡಿದ್ದಾರೆ.
ನೂತನ ಜಿಲ್ಲಾಧ್ಯಕ್ಷರ ಪಟ್ಟಿ:
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.