



ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಬೈಂದೂರು ವಿಧಾನಸಭಾ ಕ್ಷೇತ್ರದ ಅಂಪಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊರಟೆ ವ್ಯಾಪ್ತಿಯಲ್ಲಿ ನಡೆದ ಮತದಾರರ ಭೇಟಿಯಾದರು.
ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಮತದಾರರ ಗಮನ ಸೆಳೆದರು. ಜೊತೆಗೆ ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಕಿರಣ್ ಹೆಗ್ಡೆ, ಜ್ಯೋತಿ ಎಮ್, ಉದಯ್ ಕುಮಾರ್ ಶೆಟ್ಟಿ, ಸರ್ಜಿತ್ ಕುಮಾರ್ ಶೆಟ್ಟಿ ಮೊದಲಾದವರು ಇದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.