logo
WhatsApp Image 2026-04-02 at 14.46.04.jpeg
hindalco everlast.jpeg

ಕಾಂಗ್ರೆಸ್ ಸರಕಾರ ಗ್ಯಾರಂಟಿ ಘೋಷಣೆ: ಪಾಕಿಸ್ತಾನ, ಶ್ರೀಲಂಕಾದಂತೆ ಆರ್ಥಿಕ ಕುಸಿತ ಆಗಬಾರದು: ನಳಿನ್ ಕುಮಾರ್ ಕಟೀಲ್

ಟ್ರೆಂಡಿಂಗ್
share whatsappshare facebookshare telegram
3 Jun 2023
post image

ಮಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿನ್ನೆ ಐದು ಗ್ಯಾರಂಟಿ ಘೋಷಣೆ ಮಾಡಿದೆ.ಈ ಬಗ್ಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ಘೋಷಣೆ ಮಾಡಿದೆ.ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಗ್ಯಾರೆಂಟಿ ಜಾರಿಗೆ 24 ಗಂಟೆ ಅವಕಾಶ ಹೇಳಲಾಗಿತ್ತು.ಇದೀಗ ಜನಾಕ್ರೋಶದ ಬಳಿಕ ತಡವಾಗಿ ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಸರಕಾರ ಜನಪರ ಯೋಜನೆ ಘೋಷಣೆ ಮಾಡಿದ್ದಾರೆ.ಇದನ್ನು ಸ್ವಾಗತಿಸ್ತೇನೆ‌.ಆದರೆ ಇದಕ್ಕೆ ಹಣದ ಮೂಲ, ಹಣದ ಕ್ರೋಡೀಕರಣ, ಎಷ್ಟು ವರ್ಷ ಇರುತ್ತೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ಸು ಪ್ರಯಾಣಿಕರಿಗೆ ಏನು ಕೊಡುಗೆ ಇದೆ? ರಾಜ್ಯದ ಬೊಕ್ಕಸದ ಹಣದ ಗತಿ ಏನು? ಯಾರಿಗೂ ಹೊರೆ ಆಗದೇ ಹೇಗೆ ನಿಯಂತ್ರಿಸ್ತೀರಾ? ನಮ್ಮದು ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಕುಸಿತ ಆಗಬಾರದು. ಆದಾಯದ ಮೂಲಗಳನ್ನು ಶ್ವೇತಪತ್ರದ ಮೂಲಕ ಹೊರಡಿಸಲಿ ಎಂದು ಹೇಳಿದ್ದಾರೆ. ಈ ಯೋಜನೆ ಜಾರಿಗೆಯಿಂದ ಬೇರೆ ಯೋಜನೆಗಳ ಗತಿಯೇನು? ಜನರಿಗೆ ಹೊರೆಯಾಗದಂತೆ ಈ ಯೋಜನೆ ಜಾರಿಯಾಗಲಿ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.