logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೆಪಿ ಶಾಸಕರ ಅಮಾನತು ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಕಾಂಗ್ರೆಸ್ ನಿಂದ ಸ್ಪೀಕರ್ ಅಧಿಕಾರ ದುರ್ಬಳಕೆ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್

ಟ್ರೆಂಡಿಂಗ್
share whatsappshare facebookshare telegram
20 Jul 2023
post image

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಾಯೋಜಿತ ಹೊರ ರಾಜ್ಯಗಳ ಕಳಂಕಿತ ರಾಜಕಾರಿಣಿಗಳ ಸಮಾವೇಶಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಶಿಷ್ಟಾಚಾರ ಉಲ್ಲಂಘಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸುವ ಮೂಲಕ ವಿಪಕ್ಷವನ್ನು ಹತ್ತಿಕ್ಕಲು ಕಾಂಗ್ರೆಸ್, ಸ್ಪೀಕರ್ ಸ್ಥಾನದ ಅಧಿಕಾರವನ್ನು ದುರ್ಬಳಕೆ ಮಾಡಿರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ತಮ್ಮ ಹುಳುಕನ್ನು ಮುಚ್ಚಿಹಾಕಲು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುವ ಜೊತೆಗೆ ವಿಪಕ್ಷ ಶಾಸಕರ ಹಕ್ಕನ್ನು ಮೊಟಕುಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸದನದಲ್ಲಿ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದು ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್ಸಿನ ಕೈಗೊಂಬೆಯನ್ನಾಗಿಸಿರುವುದು ಸ್ಪೀಕರ್ ಸದನವನ್ನು ನಡೆಸಿಕೊಳ್ಳುವ ರೀತಿಯಿಂದ ಸ್ಪಷ್ಟವಾಗಿದೆ.

ಈ ಹಿಂದೆ ಸದನದಲ್ಲಿ ಕಾಂಗ್ರೆಸ್ ಶಾಸಕರು ಯಾವ ರೀತಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದರು ಎಂಬುದನ್ನು ಕಾಂಗ್ರೆಸಿಗರು ತಿಳಿದುಕೊಳ್ಳುವುದು ಉತ್ತಮ. ಸದನದಲ್ಲಿ ಮಸೂದೆಯ ಪ್ರತಿಗಳನ್ನು ಹರಿದು ಹಾಕಿ, ಸ್ಪೀಕರ್ ಮೇಲೆ ದೈಹಿಕ ಹಲ್ಲೆ ನಡೆಸಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾರಣವಾಗಿರುವ ಐದು ನಕಲಿ ಗ್ಯಾರಂಟಿಗಳನ್ನು ನುಡಿದಂತೆ ಯಥಾವತ್ತಾಗಿ ಜಾರಿಗೊಳಿಸಲು ವಿಫಲವಾಗಿರುವ ಜನ ವಿರೋಧಿ ಕಾಂಗ್ರೆಸ್ ಇದೀಗ ಸರಕಾರದ ವಿಪಕ್ಷವನ್ನು ಹತ್ತಿಕ್ಕುವ ಕಾರ್ಯದಲ್ಲಿ ನಿರತವಾಗಿರುವುದನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಯವಂಚಕ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನಯನಾ ಗಣೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.