logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಗ್ರಾಹಕರು ದೈನಂದಿನ ಸರಕು ಹಾಗೂ ಸೇವೆಗಳನ್ನು ಪಡೆಯುವಾಗ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಟ್ರೆಂಡಿಂಗ್
share whatsappshare facebookshare telegram
28 Dec 2023
post image

ಉಡುಪಿ: ಪ್ರತಿಯೊಬ್ಬ ಸಾರ್ವಜನಿಕರು ಗ್ರಾಹಕರಾಗಿದ್ದು, ತಮ್ಮ ದೈನಂದಿನ ಜೀವನದಲ್ಲಿ ಸರಕು ಹಾಗೂ ಸೇವೆಗಳನ್ನು ಪಡೆಯುವಾಗ ಎಚ್ಚರವಹಿಸಬೇಕು. ಒಂದೊಮ್ಮೆ ಮೋಸವಾದಲ್ಲಿ ಗ್ರಾಹಕರ ನ್ಯಾಯಾಲಯಕ್ಕೆ ಮೊರೆ ಹೋಗುವುದು ಒಳಿತು ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ (ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಗ್ರಾಹಕರ ಹಕ್ಕುಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಬಳಕೆದಾರರ ಕಾನೂನು ಪ್ರಮುಖ ಪಾತ್ರ ವಹಿಸುತ್ತಿದೆ. ಇಂದಿನ ಮಾರುಕಟ್ಟೆಗಳು ಜಾಹೀರಾತು ಹಾಗೂ ಇತರೆ ಮಾಧ್ಯಮಗಳ ಮೂಲಕ ಸಾರ್ವಜನಿಕರನ್ನು ಆಕರ್ಷಿಸುತ್ತಿದ್ದು, ನಮ್ಮ ಅವಶ್ಯಕತೆಗಳನ್ನು ಅರಿತು ಸರಕು ಹಾಗೂ ಸೇವೆಗಳನ್ನು ಖರೀದಿಸಬೇಕು ಎಂದರು.

ಇಂದಿನ ಯುಗದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ನ ಆಕರ್ಷಣೆ ಹಾಗೂ ಇ-ಕಾಮರ್ಸ್ ಗಳಲ್ಲಿ ವ್ಯಾಪಾರ ವ್ಯವಹಾರಗಳು ಆನ್‌ಲೈನ್ ಮೂಲಕ ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಗ್ರಾಹಕರ ದಿಕ್ಕು ತಪ್ಪಿಸುವ ಸನ್ನಿವೇಶಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದ್ದು, ಈ ವಿದ್ಯಮಾನಗಳ ಬಗ್ಗೆ ಎಚ್ಚರದಿಂದ ಇರಬೇಕು. ಆಹಾರ, ಔಷಧಿ ಮುಂತಾದ ದೈನಂದಿನ ವಸ್ತುಗಳನ್ನು ಖರೀದಿಸುವ ಮೊದಲು ಅದರ ಉತ್ಪಾದನಾ ದಿನಾಂಕ ಹಾಗೂ ಎಕ್ಸ್ಪೈರಿ ದಿನಾಂಕವನ್ನು ಪರೀಕ್ಷಿಸಿ, ನಂತರ ಖರೀದಿಸಬೇಕು. ಎಕ್ಸ್ಪೈರಿ ಔಷಧಿಗಳನ್ನು ಮಾರಾಟ ಮಾಡುವುದು ಕೂಡ ಕಾನೂನು ಬಾಹಿರವಾಗಿದ್ದು, ಸಾರ್ವಜನಿಕರಿಗೆ ಗ್ರಾಹಕರ ರಕ್ಷಣಾ ಕಾಯಿದೆ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಗ್ರಾಹಕರು ತಮ್ಮದೇ ಆದ ಹಕ್ಕುಗಳನ್ನು ಹೊಂದಿದ್ದು, ಮಾರುಕಟ್ಟೆಯಲ್ಲಿ ವ್ಯವಹರಿಸುವಾಗ ಪ್ರತಿಯೊಬ್ಬರೂ ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ಅರಿವನ್ನು ಹೊಂದಿ, ತಮಗೆ ಅನ್ಯಾಯವಾಗದ ರೀತಿಯಲ್ಲಿ ಎಚ್ಚರ ವಹಿಸಬೇಕು ಎಂದರು.

ಸಂಚಾಲಕ ಯು.ಜಿ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ದೇಶದಲ್ಲಿ ಗ್ರಾಹಕರ ರಕ್ಷಣೆಯನ್ನು ಗ್ರಾಹಕ ರಕ್ಷಣಾ ಕಾಯ್ದೆ ಅಡಿಯಲ್ಲಿ ಪಡೆಯಬಹುದಾಗಿದ್ದು, ಗ್ರಾಹಕರು ತಮಗಾದ ಅನ್ಯಾಯಗಳ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲಾಗಿರುವ ಗ್ರಾಹಕ ವಿವಾದ ಪರಿಹಾರ ವೇದಿಕೆಗೆ ದೂರು ಸಲ್ಲಿಸಿ, ನ್ಯಾಯವನ್ನು ಪಡೆಯಬಹುದಾಗಿದೆ. ಆಧುನಿಕ ಈ ಡಿಜಿಟಲ್ ಯುಗದಲ್ಲಿ ನಮಗೆ ಗೊತ್ತಲ್ಲದೇ ನಾವು ಮೋಸ ಹೋಗುತ್ತಿದ್ದೇವೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರದಿಂದಿರಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಎ.ಪಿ. ಕೊಡಂಚ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಶ್ರೀನಿವಾಸ ಉಪಾಧ್ಯ, ಬಳಕೆದಾರರ ವೇದಿಕೆಯ ಸಹ ಸಂಚಾಲಕ ಪ್ರೊ.ಕೆ ನಾರಾಯಣನ್, ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸುಜಾತಾ ಕೋರಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ ಸ್ವಾಗತಿಸಿ, ಲಕ್ಷ್ಮೀಬಾಯಿ ವಂದಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.