logo
WhatsApp Image 2026-04-02 at 14.46.04.jpeg
hindalco everlast.jpeg

ಗಾಂಜಾ ಸೇವನೆ: ಯಡ್ತರೆಯಲ್ಲಿ ಯುವಕ ಪೊಲೀಸರ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
12 Feb 2023
post image

ಕುಂದಾಪುರ: ಗಾಂಜಾ ಸೇವನೆ ಸಂಬಂಧಿಸಿ ಯುವಕನೋರ್ವನನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಯಡ್ತರೆ ಗ್ರಾಮದ ಬೈಂದೂರು ಸರಕಾರಿ ಬಸ್ ನಿಲ್ದಾಣದಲ್ಲಿ ಫೆ.11ರಂದು ನಡೆದಿದೆ. ಸ್ಥಳೀಯ ನಿವಾಸಿ 22ವರ್ಷದ ವಿಶಾಲ್ ಎಂಬಾತನು ಬಸ್ ನಿಲ್ದಾಣದ ಬಳಿ ಮಾದಕವಸ್ತು ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ ಪಡೆದುಕೊಂಡ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.