



ಕಾರ್ಕಳ:ಪುರಸಭೆಯು ಸಾರ್ವಜನಿಕರಿಗೆ ಕಲುಷಿತ ನೀರು ಸರಬರಾಜು ಮಾಡಿ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತಿದೆ ಇದನ್ನು ತಕ್ಷಣ ಸರಿಪಡಿಸಬೇಕು ಇಲ್ಲವಾದರೆ ಸಾರ್ವಜನಿಕರೊಂದಿಗೆ ಪುರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಪುರಸಭಾ ಸದಸ್ಯ ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 15 ದಿನಗಳಿಂದ ಪುರಸಭೆಯ ವ್ಯಾಪ್ತಿಯಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದು ಮನೆಯಲ್ಲಿ ಮತ್ತು ಹೋಟೆಲ್ ಗಳಲ್ಲಿ ಇದೆ ನೀರನ್ನು ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ ಇದರಿಂದಾಗಿ ಜನರ ಅರೋಗ್ಯ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ರೋಗ ಹರಡಲು ಕಾರಣವಾಗುತ್ತದೆ ಪುರಸಭಾ ಆಡಳಿತ ತಕ್ಷಣ ಕ್ರಮ ಜರುಗಿಸಬೇಕು ಇಲ್ಲವಾದರೆ ಪ್ರತಿಭಟನೆ ಅನಿವಾರ್ಯವಾದೀತು ಎಂದು ಶುಭದರಾವ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.