logo
WhatsApp Image 2026-04-02 at 14.46.04.jpeg
hindalco everlast.jpeg

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ವಿವಾದ: ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಬಳಸುವಂತೆ ರಾಜ್ಯ ಸರ್ಕಾರ ಸೂಚನೆ..!

ಟ್ರೆಂಡಿಂಗ್
share whatsappshare facebookshare telegram
20 Sept 2024
post image

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಶುಕ್ರವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.

ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳು, ದೀಪಗಳು, ಎಲ್ಲಾ ರೀತಿಯ ಪ್ರಸಾದಗಳ ತಯಾರಿಕೆ ಮತ್ತು 'ದಾಸೋಹ ಭವನ'ಗಳಲ್ಲಿ ಹೋಮ್ ಬ್ರಾಂಡ್ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಆದೇಶಿಸಲಾಗಿದೆ. ದೇವಸ್ಥಾನಗಳಲ್ಲಿ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸುತ್ತೋಲೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.